ಬೆಂಗಳೂರು: ಮಹಿಳೆ ಅಪಹರಣ ಪ್ರಕರಣ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ನಡೆಸಿತು.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿ ವಾದ ಆಲಿಸಿದ ಬಳಿಕ, ಮೇ.31ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದೆ.
ಎಸ್‌ಐಟಿ ಪರ ಎಸ್ ಪಿಪಿ ಅವರು ಭವಾನಿ ರೇವಣ್ಣ ಅವರಿಗೆ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಿದರು. ಭವಾನಿ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು ಜಾಮೀನು ನೀಡುವಂತೆ ಮನವಿ ಮಾಡಿದರು.
ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಭವಾನಿ ರೇವಣ್ಣ ವಿರುದ್ಧದ ಮಹಿಳೆ ಅಪಹರಣ ಪ್ರಕರಣ ಸಂಬಂಧದ ಜಾಮೀನು ಅರ್ಜಿಯ ವಾದ ಪ್ರತಿವಾದ ಆಲಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಮೇ.31ಕ್ಕೆ ಆದೇಶ ಕಾಯ್ದಿರಿಸಿ ಮುಂದೂಡಿಕೆ ಮಾಡಿದೆ.