Friday, 21st June 2024

ಬಸವಕಲ್ಯಾಣ ಬೈಎಲೆಕ್ಷನ್‌: ಪಕ್ಷೇತರರಿಂದಲೂ ನಾಮಪತ್ರ ಸಲ್ಲಿಕೆ ಇಂದು

ಬೀದರ್‌: ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್‌ನಿಂದ ಮಾಲಾ ನಾರಾಯಣರಾವ್‌ ಅವರು ಮಾ.24ರಂದು ಕುಟುಂಬದ ಸದಸ್ಯರ ಜೊತೆ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಪಕ್ಷದ ವರಿಷ್ಠರೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸುವರು.

ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮ್ಮದ್‌, ಶಾಸಕರಾದ ರಾಜಶೇಖರ ಪಾಟೀಲ, ರಹೀಂ ಖಾನ್‌, ವಿಧಾನ ಪರಿಷತ್‌ ಸದಸ್ಯರಾದ ಸಿ.ಎಂ.ಇಬ್ರಾಹಿಂ, ವಿಜಯಸಿಂಗ್, ಚಂದ್ರಶೇಖರ ಪಾಟೀಲ, ಅರವಿಂದ ಕುಮಾರ ಅರಳಿ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಪಾಲ್ಗೊಳ್ಳುವರು.

ಬಸವಕಲ್ಯಾಣದ ಶಾಂತಿನಿಕೇತನ ಸಂಸ್ಥೆಯ ಮೈದಾನದಲ್ಲಿ ಬಿಜೆಪಿಯ ಸಮಾವೇಶ ಜರುಗಲಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರೂ ಪಕ್ಷದ ಮುಖಂಡ ರೊಂದಿಗೆ ನಾಮಪತ್ರ ಸಲ್ಲಿಸುವರು. ಜತೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ವಸತಿ ಸಚಿವ ವಿ.ಸೋಮಣ್ಣ, ಸಂಸದ ಭಗವಂತ ಖೂಬಾ, ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್‌ ಮಲ್ಕಾಪುರೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್‌ ಭಾಗವಹಿಸುವರು.

ಮಾಜಿ ಶಾಸಕ ಎಂ.ಜಿ.ಮುಳೆ ಅವರು ಮಂಗಳವಾರ ಬೆಂಬಲಿಗರ ಸಭೆ ನಡೆಸಿದ ಬಳಿಕ ನಾಮಪತ್ರ ಸಲ್ಲಿಸುವರು. ಪಕ್ಷದ ನಾಯಕಿ ಸುಪ್ರಿಯಾ ಸುಳೆ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಾಲ್ಲೂಕಿನ ರಾಜೋಳಾದ ಯುವಕ ಅಲ್ತಾಫ್ ಅವರು ಪಕ್ಷೇ ತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಉಪ ಚುನಾವಣೆಗೆ ಮಾ.30ರಂದು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಲಿದ್ದೇನೆ’ ಎಂದು ಹಡಪದ ಸಮಾಜದ ಕಲಬುರ್ಗಿ ವಿಭಾ ಗೀಯ ಘಟಕದ ಅಧ್ಯಕ್ಷ ಈರಣ್ಣ ಹಡಪದ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!