Saturday, 14th December 2024

ಕಲಬುರಗಿಗೆ ನಾಳೆ ಸಚಿವ ಬಿ.ಸಿ. ನಾಗೇಶ್ ಭೇಟಿ

ಕಲಬುರಗಿ: ಕಲಬುರಗಿಗೆ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಆಗಮಿಸುವರು.

ಕಲಬುರಗಿಯಿಂದ ರಸ್ತೆ ಮೂಲಕ ಗಾಣಗಾಪೂರಕ್ಕೆ ತೆರಳುವರು. ಮಧ್ಯಾಹ್ನ ಅಫಜಲ ಪುರ ತಾಲ್ಲೂಕಿನ ದೇವಲ ಗಾಣಗಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಷನ್‌ನ ರೋಡ್ ಟು ಸ್ಕೂಲ್ ಕಾರ್ಯಕ್ರಮದಡಿ ಡಿಜಿಟಲ್ ಲಿಟರೆಸಿ ಆಂಡ್ ಲೈಫ್ ಸ್ಕೀಲ್ ಹಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ನಂತರ ಮಧ್ಯಾಹ್ನ ಗಾಣಗಾಪುರದಿಂದ ರಸ್ತೆ ಮೂಲಕ ಮಂತ್ರಾಲಯಕ್ಕೆ ಪ್ರಯಾಣಿಸು ವರು ಎಂದು ಪ್ರಕಟಣೆ ತಿಳಿಸಿದೆ.

ಜುಲೈ 5ರ ಸಂಜೆ ರಾಯಚೂರದಿಂದ ರಸ್ತೆ ಮೂಲಕ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜು.6ರ ಬೆಳಿಗ್ಗೆ 9.30ಕ್ಕೆ ಕಲಬುರಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆ ನಡೆಸುವರು. ನಂತರ ಮಧ್ಯಾಹ್ನ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.