Saturday, 27th July 2024

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ: 1 ಲಕ್ಷ ಲೀಟರ್ ಹಾಲು ವ್ಯರ್ಥ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 1 ಲಕ್ಷಕ್ಕೂ ಅಧಿಕ ಲೀಟರ್ ಹಾಲು ರಸ್ತೆ ಪಾಲಾಗಿದೆ.

ನಗರದ ಮಿಲಿಟರಿ ಮಹಾದೇವ ಟೆಂಪಲ್ ಬಳಿಯ ಕಾಂಗ್ರೆಸ್ ರಸ್ತೆಯಲ್ಲಿ, ಎದುರಿಗೆ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಹಾಲಿನ ವಾಹನ ಪಲ್ಟಿಯಾಗಿದೆ. ಪರಿಣಾಮ ಹಾಲಿನ ಕ್ಯಾನ್​​ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಚಾಲಕನಿಗೆ ಹೆಚ್ಚೇನೂ ತೊಂದರೆ ಯಾಗಿಲ್ಲ. ಸಣ್ಣ-ಪುಟ್ಟ ಗಾಯಗಳಾಗಿವೆ.ನಡು ರಸ್ತೆಯಲ್ಲೇ ಹಾಲಿನ ವಾಹನ ಪಲ್ಟಿಯಾದ ಹಿನ್ನೆಲೆ 1 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ರಸ್ತೆ ತುಂಬಾ ಹರಡಿತು. ಅಪಘಾದ ಸಂಭವಿಸಿದ ಹಿನ್ನೆಲೆ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಆಗಿ ವಾಹನ ಸವಾರರು ಪರದಾಡಿದರು. ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ‌.

Leave a Reply

Your email address will not be published. Required fields are marked *

error: Content is protected !!