Thursday, 12th December 2024

ಬಿಜೆಪಿ ಕಾರ್ಯಕರ್ತರಿಗೆ ಲಾಠಿ ಏಟು: ಅಧಿಕಾರಿಗಳ ವರ್ಗಾವಣೆ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆ ಪಿ ಎಸ್ ಐ ಹಾಗೂ ಸುಬ್ರಹ್ಮಣ್ಯ ಪಿ ಸಿ ಗಳನ್ನು ವರ್ಗಾವಣೆ ಮಾಡಲಾಗಿದ್ದು, ಸ್ಥಳ ಸೂಚನೆ ಮಾಡದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ನೀಡಲು ಸೂಚಿಸಲಾಗಿದೆ.

ಬೆಳ್ಳಾರೆಗೆ ಕುಂದಾಪುರ ಎಸ್ ಐ ಆಗಿದ್ದ ಸುಹಾನ್ ಅವರನ್ನು ನೇಮಕ ಮಾಡಲಾಗಿದ್ದು, ಸುಬ್ರಹ್ಮಣ್ಯ ಠಾಣೆಗೆ ವಿಟ್ಲ ಠಾಣೆಯ ಮಂಜುನಾಥ್ ಅವರನ್ನು ಪಿ ಎಸ್ ಐ ಆಗಿ ನೇಮಕ ಮಾಡಲಾಗಿದೆ.

ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಪೊಲಿಸರ ವರ್ಗಾವಣೆ ಮಾಡಿ ಆದೇಶ ಹೊರ ಡಿಸಿದ್ದಾರೆ.