Thursday, 7th December 2023

ಫೆ.21ರಂದು ಬಳ್ಳಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಬಳ್ಳಾರಿ : ಫೆ.21ರಂದು ಬಳ್ಳಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಜನಾರ್ದನರೆಡ್ಡಿ ಹೊಸ ಪಕ್ಷ ಸ್ಥಾಪನೆ ಹಿನ್ನೆಲೆ ಟಕ್ಕರ್ ನೀಡಲು ಬಳ್ಳಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಸಮಾವೇಶ, ಕಾರ್ಯಕರ್ತರ ಸಂಘಟನಾ ಕಾರ್ಯಕ್ರಮಗಳಲ್ಲಿ ಶಾ ಭಾಗಿಯಾಗಲಿದ್ದಾರೆ.

ಇದಕ್ಕೂ ಮುನ್ನ ಬಿಜೆಪಿ ಚಾಣಕ್ಯ , ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಪುತ್ತೂರಿಗೆ ಆಗಮಿಸುವಿವೇಕಾನಂದ ವಿದ್ಯಾಸಂಸ್ಥೆಯ ಆವರಣದಲ್ಲಿ ಮಧ್ಯಾಹ್ನ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗ ಲಿದ್ದಾರೆ.

ಫೆ.10 ರಿಂದ 12 ರವರೆಗೆ ನೆಹರೂ ನಗರದಲ್ಲಿರುವ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕ್ಯಾಂಪ್ಕೋ ಆಶ್ರಯದಲ್ಲಿ ಬೃಹತ್ ಕೃಷಿ ಯಂತ್ರ ಮೇಳವೂ ನಡೆಯಲಿದೆ. ಇನ್ನೂ, ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ನೀಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಚುನಾವಣೆ ನಡೆಯ ಲಿರುವ ಕರ್ನಾಟಕಕ್ಕೆ ಇದು ಅವರ ಮೂರನೇ ಭೇಟಿಯಾಗಿದೆ.

ಫೆಬ್ರವರಿ 6 ರಂದು ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಮೋದಿ ಅವರು ಇಂಡಿಯಾ ಎನರ್ಜಿ ವೀಕ್ ಅನ್ನು ಉದ್ಘಾಟಿಸಲಿದ್ದಾರೆ.

ನಂತರ ತುಮಕೂರಿನ ಗುಬ್ಬಿ ತಾಲ್ಲೂಕಿನ ಬಿದರಹಳ್ಳಿ ಕಾವಲ್ ಗೆ ತೆರಳಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಹೆಲಿ ಕಾಪ್ಟರ್ ಫ್ಯಾಕ್ಟರಿ ಉದ್ಘಾಟಿಸಲಿದ್ದು, ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ ಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

error: Content is protected !!