Tuesday, 30th May 2023

ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ನೇಮಕ

ಬೆಂಗಳೂರು: ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಶುಕ್ರವಾರ ನಗರದಲ್ಲಿ ಪೌರ ಕಾರ್ಮಿಕರ ಜೊತೆ ಉಪಹಾರ ಸೇವಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಂತರ ಇನ್ನುಳಿದ ಕಾರ್ಮಿಕ ಖಾಯಂ ನೇಮಕ ಮಾಡಲಾ ಗುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ, ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ. ಶೀಘ್ರ ಪೌರ ಕಾರ್ಮಿಕರ ಖಾಯಂ ಬಗ್ಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ಐಡಿಪಿ ಸಾಲಪ್ಪ ವರದಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕಳೆದ ಸಂಪುಟ ಸಭೆಯಲ್ಲಿ 11 ಸಾವಿರ ಪೌರಕಾರ್ಮಿಕರ ಸೇವೆ ಕಾಯಂಗೆ ತೀರ್ಮಾನಿಸಲಾಗಿತ್ತು.

ಇನ್ನೂ 43 ಸಾವಿರ ಜನರು ಬಾಕಿ ಇದ್ದು, ಅವರ ಸೇವೆ ಕಾಯಂಗೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

error: Content is protected !!