Wednesday, 11th December 2024

ಬೆಂಗಳೂರಿಗೆ 45 ಸಾವಿರ ಕೋಟಿ ಅನುದಾನ

ಬೆಂಗಳೂರು : ಬಜೆಟ್ ನಲ್ಲಿ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದು, 45 ಸಾವಿರ ಕೋಟಿ ರೂ.  ಅನುದಾನ ಘೋಷಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ  ಅಧಿಕೃತವಾಗಿ ಜಾರಿಗೆ ಬರಲಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗಿರುವುದರಿಂದ ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ಘೋಷಿಸ ಲಾಗಿದೆ.

ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದ್ದು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ಬಜೆಟ್ ನಲ್ಲಿ ನಿರ್ಧಾರ ಮಾಡಲಾಗಿದೆ.

19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ.

ರೈತರಿಗೆ 3 ರಿಂದ 5 ಲಕ್ಷ ರೂ.ವರೆಗೆ ಅಲ್ಪಾವಧಿ ಸಾಲ ನೀಡಲಾಗುವುದು. ಮೈಸೂರು-ಕಲಬುರಗಿಯಲ್ಲಿ ಟ್ರಾಮಾ ಸೆಂಟರ್ ಗೆ ಅನುದಾನ, ನಮ್ಮ ಮೆಟ್ರೋಗೆ 30,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಅನುದಾನ ನೀಡಲಾಗುವುದು, ಬ್ರ್ಯಾಂಡ್ ಬೆಂಗಳೂರಿಗೆ ಬಂಪರ್ ಗಿಫ್ಟ್ ನೀಡಲಾಗಿದ್ದು, ನಮ್ಮ ಮೆಟ್ರೋಗೆ 30,000 ಕೋಟಿ ರೂ. ಅನುದಾನ ನೀಡಲಾಗಿದೆ. 45 ಸಾವಿರ ಕೋಟಿ ಅನುದಾನ ನೀಡಲಾಗಿದೆ. ವೈಟ್ ಟಾಪಿಂಗ್, ರಸ್ತೆಅಭಿವೃದ್ಧಿ, ತ್ಯಾಜ ವಿಲೇವಾರಿ, ಮೆಟ್ರೋ ಉಪನಗರ ರೈಲಿಗೆ 30 ಸಾವಿರ ಕೋಟಿ ರೂ. ನಿಯೋಜನೆ ಮಾಡಲಾಗಿದೆ ಎಂದರು.