Saturday, 14th December 2024

ವೃದ್ಧ ದಂಪತಿಗೆ ಕಾರು ಡಿಕ್ಕಿ: ನಟ ನಾಗಭೂಷಣ್ ಪೊಲೀಸರ ವಶಕ್ಕೆ

ಬೆಂಗಳೂರು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ದಂಪತಿಗೆ ಕಾರು ಡಿಕ್ಕಿ ಯಾಗಿ, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.

ಕನಕಪುರ ರಸ್ತೆಯಲ್ಲಿ ನಡೆದಿರುವಂತಹ ಅಪಘಾತವಾಗಿದ್ದು, ನಟ ನಾಗಭೂಷಣ ವಿರುದ್ಧ ಅಪಘಾತ ಪ್ರಕರಣ ದಾಖಲಾಗಿದೆ.

ವಸಂತಪುರ ರಸ್ತೆಯ ಅಪಾರ್ಟ್ಮೆಂಟ್ ಬಳಿ ಫುಟ್ ಬಾತ್ ಮೇಲೆ ಗಂಡ ಹೆಂಡತಿ ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ದಂಪತಿಗೆ ಕಾರು ಡಿಕ್ಕಿಯಾಗಿದ್ದು, ಇ ವೇಳೆ ಪತ್ನಿ ಸಾವನಪ್ಪಿದ್ದಾಳೆ.

ಅಪಘಾತದಲ್ಲಿ ಪತಿ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯನ್ನು ಪ್ರೇಮಾ ಎಂದು ಗುರುತಿಸಲಾಗಿದ್ದು, ಪತಿ ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಸಿದಂತೆ ಕೆ.ಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಟ ನಾಗಭೂಷಣ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.