ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕಾಗಿ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಇದೀಗ ಅಂಬೇಡ್ಕರ್ ಮೈದಾನದಿಂದ ಲೀಲಾವತಿ ಅವರ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿರಸಲಾಗಿದ್ದು, ಸಾರ್ವಜನಿಕರು, ಗಣ್ಯರು ದರ್ಶನ ಪಡೆಯುತ್ತಿದ್ದಾರೆ.
ರಾಜ್ಯ ಸರ್ಕಾರದಿಂದ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ. ಸುಮಾರು 11 ಗಂಟೆಯಿಂದ ಪಾರ್ಥೀವ ಶರೀರದ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಸರಿ ಸುಮಾರು 2 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕೈಗೊಳ್ಳಲಾಗಿದೆ. ಚಿತ್ರರಂಗದವರೂ ಸೇರಿದಂತೆ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದ್ ಬಸ್ತೋ ಕೈಗೊಳ್ಳಲಾಗಿದೆ.
ರವೀಂದ್ರ ಕಲಾಕ್ಷೇತ್ರಕ್ಕೂ ಮುನ್ನ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ನಟಿಯ ಪಾರ್ಥೀವ ಶರೀರ ಇರಿಸಲಾಗಿತ್ತು. ಮುಂಜಾನೆ 5:30 ರಿಂದ 10ರ ವರೆಗೂ ಸಾರ್ವಜನಿಕರು ಆಗಮಿಸಿ ನಟಿಯ ಅಂತಿಮ ದರ್ಶನ ಪಡೆದರು. ಸುಮಾರು 2:30 ರವರೆಗೆ ದರ್ಶನಕ್ಕೆ ಅವಕಾಶವಿದೆ. ನಂತರ, ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ತೋಟದಲ್ಲೇ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲು ಸಿದ್ಧತೆ ನಡೆಸಲಾಗುತ್ತಿದೆ.