ಇದೀಗ ಅವರು ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಬೇಕಾ ಗುತ್ತದೆ. ಒಂದು ವೇಳೆ ಅಮೃತ್ ಪಾಲ್ ಜಾಮೀನು ಕೋರಿದರೂ ಸಹ ಅದನ್ನು ನ್ಯಾಯಾಲಯ ಪುರಸ್ಕರಿಸುವ ಸಾಧ್ಯತೆಗಳು ತೀರಾ ಕಡಿಮೆ ಎಂದು ವಿಶ್ಲೇಷಿಸಲಾಗಿದೆ.
ಜಾಮೀನು ಕೋರಿ ಅಮೃತ್ ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಆನಂದ ಟಿ. ಚೌಹಾಣ್ ಸೋಮವಾರ ವಜಾ ಗೊಳಿಸಿದ್ದಾರೆ. ‘ಗಂಭೀರ ಸ್ವರೂಪದ ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವಾಗ ಜಾಮೀನು ನೀಡುವುದು ಉಚಿತವಲ್ಲ’ ಎಂಬ ಪ್ರಾಸಿಕ್ಯೂಷನ್ ವಾದವನ್ನು ಮನ್ನಿಸಿ ದ್ದಾರೆ.
ಪಿಎಸ್ಐ ನೇಮಕಾತಿ ವಿಭಾಗದ ಎಡಿಜಿಪಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಮೃತ್ ಪೌಲ್, ಹಗರಣದ 35ನೇ ಆರೋಪಿ ಯಾಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಆರೋಪಿ ಪೌಲ್ ತಮ್ಮ ಬಳಿಯಿದ್ದ ಪಿಎಸ್ಐ ನೇಮಕಾತಿಗೆ ಸಂಬಂಧಿಸಿದ ಒಎಂಆರ್ ಉತ್ತರ ಪತ್ರಿಕೆಗಳ ಕಿಟ್ ಬಾಕ್ಸ್ ಗಳನ್ನು ಇಡಲಾಗಿದ್ದ ಅಲ್ಮೇರಾದ ಕೀಯನ್ನು ಒಎಂಆರ್ ಪತ್ರಿಕೆ ತಿದ್ದುಪಡಿ ಮಾಡಲು ಒಂದನೇ ಆರೋಪಿಗೆ ನೀಡಿದ್ದಾಗಿ 31ನೇ ಆರೋಪಿ ಹೇಳಿಕೆ ನೀಡಿರುತ್ತಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬೇಕಾಗಿದೆ. ಪೌಲ್ ಅವರಿಂದ ವಶಪಡಿಸಿಕೊಂಡಿರುವ ಮೊಬೈಲ್ ಫೋನ್ಗಳನ್ನು ಎಫ್ಎಸ್ಎಲ್ ವಿಶ್ಲೇಷಣೆಗೆ ಕಳುಹಿಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ.