Sunday, 15th December 2024

ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ಅವಧಿ 3 ತಾಸು ಕಡಿತ

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸುತ್ತೋಲೆ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಕ್ಷಣ ನೀಡುವಂತೆ ಸೂಚನೆ ನೀಡಿದೆ.

ರಾಜ್ಯ ಸರ್ಕಾರವು ಅಂಗನವಾಡಿ ಶಿಕ್ಷಣ ಅವಧಿಯನ್ನು 3 ತಾಸು ಕಡಿತ ಮಾಡಿದ್ದು, ಈ ಹಿಂದೆ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಶಿಕ್ಷಣ ಅವಧಿಯನ್ನು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ನಡೆಸುವಂತೆ ಆದೇಶಿಸಲಾಗಿತ್ತು. ಇದನ್ನು ಬದಲಿಸಿ ಶಿಕ್ಷಣದ ಅವಧಿಯನ್ನು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಸಲು ಸಮಯ ನಿಗದಿ ಮಾಡ ಲಾಗಿದೆ.

ಇನ್ನು ಅಂಗನವಾಡಿ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಫಲಾನುಭವಿಗಳು ಮತ್ತು ಭಾಗ್ಯ ಲಕ್ಷ್ಮೀ ಯೋಜನೆಯ ಫಲಾನುಭವಿಯ ಪೋಷಕರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾದರೆ ಅಥವಾ ಚರ್ಚೆ ನಡೆಸ ಬೇಕಾದರೆ ಮಧ್ಯಾಹ್ನ 2 ಗಂಟೆಯ ನಂತರ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

 
Read E-Paper click here