ಜುಲೈ 3ರಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ಪ್ರತಿಪಕ್ಷ ಹೋರಾಟಕ್ಕೆ ಸಜ್ಜಾಗಿದೆ. ಈ ನಡುವೆ ಸರ್ಕಾರ ಯೋಜನೆಗೆ ಚಾಲನೆ ಕೊಡುವ ಮೂಲಕ ಹೋರಾಟದ ತೀವ್ರತೆ ಕುಗ್ಗುವಂತೆ ಮಾಡುತ್ತಿದೆ.
ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯ ಹೊರತಾಗಿ ರಾಜ್ಯ ಸರ್ಕಾರದಿಂದ ಐದು ಕೆಜಿ ಅಕ್ಕಿಯ ಬದಲು ತಕ್ಷಣಕ್ಕೆ ಹಣ ನೀಡಲು ಉದ್ದೇಶಿಸಿದ್ದು, ಜುಲೈ 1ರಿಂದಲೇ ಅನ್ವಯ ವಾಗುವಂತೆ ಬಿಪಿಎಲ್ ಕಾರ್ಡ್ದಾರರ ಖಾತೆಗೆ ಹಣ ಜಮಾ ಆಗಲಿದೆ.
ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಮಾತು ಕೊಟ್ಟಂತೆ ಜುಲೈ 1ರಿಂದ ಯೋಜನೆ ಜಾರಿಯಾಗಲಿದೆ. ಪಡಿತರ ಚೀಟಿ ಹೊಂದಿರುವವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ. ಯಾರು ಖಾತೆ ತೆರೆದಿ ಲ್ಲವೋ ಅಂತಹವರು ಬ್ಯಾಂಕ್ ಖಾತೆ ತೆರೆಯ ಬೇಕಾಗುತ್ತದೆ ಎಂದಿದ್ದಾರೆ.