ಬೆಂಗಳೂರು: ಕೇಂಧ್ರ ಸರ್ಕಾರದ ವಿರುದ್ದ ಜೂನ್ 20ರಿಂದ ಕಾಂಗ್ರೆಸ್ ನಾಯಕರು ಕರೆ ನೀಡಿರುವ ಕಿಡಿಕಾರಿರುವ ಬಿಜೆಪಿ ಶಾಸಕ ಮಾಜಿ ಸಚಿವ ಆರ್.ಅಶೋಕ್ ಟಾಂಗ್ ನೀಡಿದ್ದು, ನೀವು ಪ್ರತಿ ಭಟನೆ ಮಾಡಲು ಮುಂದಾ ದರೆ ನಾವು ಅದಕ್ಕೆ ಶಾಮೀಯಾನ ವ್ಯವಸ್ಥೆ ಮಾಡ್ತೀವಿ ಎಂದು ಹೇಳಿದ್ದಾರೆ.
ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರ ಹೊರಟಿದೆ. ಕಾಂಗ್ರೆಸ್ ಪಕ್ಷವು ಪಿಎಫ್‍ಐ, ಕೆಎಫ್‍ಡಿ ಪರವಾಗಿದೆಯೇ? ಎಂದು ಪ್ರಶ್ನಿಸಿದರು. ಈ ರೀತಿ ಜನಾದೇಶದ ದುರ್ಬಳಕೆಗೆ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.
30ರಿಂದ 40 ಲಕ್ಷಕ್ಕೂ ಹಿಂದೂಗಳು ದುಡ್ಡಿನ ಆಮಿಷ, ಲವ್ ಜಿಹಾದ್, ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ಆಗದೆ ಮತಾಂತರ ಆದ ಮಾಹಿತಿ ಇದೆ ಎಂದು ವಿವರಿಸಿದರು.
ಕಾಂಗ್ರೆಸ್ ಯಾರಿಗಾಗಿ ಈ ಕಾಯ್ದೆ ತರುತ್ತಿದೆ? ಎಂದ ಅವರು, ಬಲವಂತದ ಮತಾಂತರ ಸಲ್ಲದು ಎಂಬ ಭಾವನೆ ಹಾಗೂ ನಿಲುವನ್ನು ಮಹಾತ್ಮ ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ಅವರು ಹೊಂದಿದ್ದರು ಎಂದು ವಿವರಿಸಿದರು. ಮತಾಂತರ ಆಗುವುದಾದರೆ ಕಾನೂನು ಪ್ರಕಾರ ಆಗಬೇಕೆಂಬ ನಮ್ಮ ಕಾಯ್ದೆಯಲ್ಲಿ ತಪ್ಪೇನಿದೆ? ಎಂದು ಕೇಳಿದರು.