ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಿಡಿ ಯುವತಿ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ.
ವಿಡಿಯೋದಲ್ಲಿ ಯುವತಿ, ತನ್ನ ತಂದೆ-ತಾಯಿಗಳಿಗೆ ರಕ್ಷಣೆ ನೀಡಿ. ಅವರ ರಕ್ಷಣೆ ಖಚಿತವಾದರೆ ನಾನು ಎಸ್‌ಐಟಿ ಮುಂದೆ ಹೇಳಿಕೆ ದಾಖಲಿಸುತ್ತೇನೆ ಎಂದು ತಿಳಿಸಿದ್ದಾಳೆ.
ನನ್ನ ತಂದೆ – ತಾಯಿ ಮಗಳು ಕಿಡ್ನಾಪ್ ಆಗಿದ್ದಾಳೆಂದು ದೂರು ನೀಡಿದ್ದಾರೆ. ದೂರಿನ ಬಳಿಕ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಆದರೆ ತಂದೆ-ತಾಯಿ ಸ್ವ ಇಚ್ಛೆಯಿಂದ ದೂರು ನೀಡಿಲ್ಲ. ನಾನು ಮಹಿಳಾ ಸಂಘಟನೆಗಳು, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ರಮೇಶ್ ಕುಮಾರ್ ಹಾಗೂ ಎಲ್ಲರಲ್ಲಿ ಕೇಳಿಕೊಳ್ಳುವುದು ಇಷ್ಟೇ. ಮೊದಲು ನನ್ನ ಅಪ್ಪ-ಅಮ್ಮನಿಗೆ ರಕ್ಷಣೆ ನೀಡಿ. ಅವರಿಗೆ ರಕ್ಷಣೆ ನೀಡಿದ್ದು ಖಚಿತವಾದರೆ ನಾನು ಬಂದು ಎಸ್‌ಐಟಿ ಮುಂದೆ ಹೇಳಿಕೆ ದಾಖಲಿಸುತ್ತೇನೆ ಎಂದು ತಿಳಿಸಿದ್ದಾಳೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ