Friday, 2nd June 2023

ನಿಯಮ ಪಾಲಿಸದ ಅರಬಿ ಶಾಲೆಗಳ ವಿರುದ್ದ ಸಮೀಕ್ಷೆ: ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ  ಪಾಲಿಸದೆ ಇರುವುದು ಕಂಡು ಬಂದಿದ್ದು, ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿರುವ ಅರೇಬಿಕ್ ಶಾಲೆ ಗಳು ರಾಜ್ಯ ಶಿಕ್ಷಣ ಇಲಾಖೆಯು ಸೂಚಿಸುವ ಯಾವುದೇ ನಿಯಮಗಳನ್ನೂ ಅನುಸರಿಸು ತ್ತಿಲ್ಲ. ಹೀಗಾಗಿ ಅದನ್ನು ಪರಿಶೀಲಿಸಲು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 106 ಅನುದಾನಿತ ಹಾಗೂ 80 ಅನುದಾನರಹಿತ ಅರೇಬಿಕ್ ಶಾಲೆಗಳಿವೆ. ಅಲ್ಲಿ ಇಲಾಖೆಯ ಪಠ್ಯಕ್ರಮದಂತೆ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ಸೇರುತ್ತಾರೆ. ಎಸ್ಸೆಸ್ಸೆಲ್ಸಿ ವೇಳೆಗೆ 2 ಸಾವಿರ ವಿದ್ಯಾರ್ಥಿಗಳಷ್ಟೇ ಇರುತ್ತಾರೆ. ದಾಖಲಾಗುವ ಮತ್ತು ಹಾಜರಾಗುವವರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ. ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಇದಾಗಬಾರದು’ ಎಂದರು.

error: Content is protected !!