ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಸೆಪ್ಟೆಂಬರ್ 13ರಂದು ಶುಕ್ರವಾರ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ (Bangalore Job Fair) ಹಮ್ಮಿಕೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ | Asian Champions Trophy: ಕೊರಿಯಾ ವಿರುದ್ಧ ಭಾರತಕ್ಕೆ 3-1 ಜಯಭೇರಿ
ಯಾರಿಗೆಲ್ಲ ಅವಕಾಶ?
ಉದ್ಯೋಗಮೇಳದಲ್ಲಿ 50 ಕ್ಕಿಂತ ಹೆಚ್ಚು ನಿಯೋಜಕರು/ ಕಂಪನಿಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವವರಿದ್ದಾರೆ. ಎಸ್.ಎಸ್.ಎಲ್.ಸಿ. ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಸ್ವ-ವಿವರಗಳ (ಬಯೋಡಾಟಾ) ಗಳೊಂದಿಗೆ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | CM Siddaramaiah: ಬೆಂಗಳೂರು ನಗರ ಜನತೆಗೆ ಗುಡ್‌ನ್ಯೂಸ್; ರಸ್ತೆಗಿಳಿದಿವೆ 100 ನೂತನ ಬಿಎಂಟಿಸಿ ಬಸ್‌ಗಳು
ನೋಂದಣಿ ಹೇಗೆ?
ಅಭ್ಯರ್ಥಿಗಳು https://bangalorerural.nic.in/en/job-fair/ ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಜತೆಗೆ, ಅಭ್ಯರ್ಥಿಗಳು ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾಲೂಕು ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡಿಯೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದೆ.