Friday, 13th December 2024

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಇಂದು ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

118 ಕಿಮೀ ಉದ್ದದ ಈ ಯೋಜನೆಯನ್ನು ಒಟ್ಟು 8,480 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಗಳವರೆಗೆ ಕಡಿಮೆ ಮಾಡುತ್ತದೆ.

ಮಂಡ್ಯಕ್ಕೆ ಪ್ರಧಾನಮಂತ್ರಿಯವರ ಭೇಟಿಯ ಕುರಿತು ಮಾಹಿತಿ ನೀಡಿದ ಪ್ರಧಾನಮಂತ್ರಿ ಕಾರ್ಯಾಲಯವು, “ಮೂಲಸೌಕರ್ಯ ಯೋಜನೆಗಳ ತ್ವರಿತ ಗತಿಯು ದೇಶಾದ್ಯಂತ ವಿಶ್ವ ದರ್ಜೆಯ ಸಂಪರ್ಕವನ್ನು ಖಚಿತಪಡಿಸಿ ಕೊಳ್ಳಲು ಪ್ರಧಾನ ಮಂತ್ರಿಯವರ ದೂರದೃಷ್ಟಿಗೆ ಸಾಕ್ಷಿಯಾಗಿದೆ. ಈ ಪ್ರಯತ್ನದಲ್ಲಿ ಪ್ರಧಾನಿಯವರು ಬೆಂಗ ಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದಿದೆ.

ಜೊತೆಗೆ ಮೈಸೂರು-ಕುಶಾಲನಗರ 4 ಪಥದ ಹೆದ್ದಾರಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮಾಡಲಿದ್ದಾರೆ. 92 ಕಿಮೀ ವ್ಯಾಪಿಸಿರುವ ಈ ಯೋಜನೆಯನ್ನು ಸುಮಾರು 4130 ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಯೋಜ ನೆಯು ಬೆಂಗಳೂರಿನೊಂದಿಗೆ ಕುಶಾಲನಗರದ ಸಂಪರ್ಕವನ್ನು ಹೆಚ್ಚಿಸು ವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಪ್ರಯಾಣದ ಸಮಯವನ್ನು ಸುಮಾರು 5 ರಿಂದ ಕೇವಲ 2.5 ಗಂಟೆಗಳವರೆಗೆ ಅರ್ಧಕ್ಕೆ ಇಳಿಸಲು ಸಹಾಯ ಮಾಡುತ್ತದೆ.

ಎಕ್ಸ್‌ಪ್ರೆಸ್‌ ವೇ ಮಾತ್ರವಲ್ಲದೆ, ಪ್ರಧಾನಿಯವರು ಸುಮಾರು 16,000 ಕೋಟಿ ರೂಪಾಯಿಗಳ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲೂ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.