Thursday, 12th December 2024

ಇಂದಿನಿಂದ ನ.7 ರವರೆಗೆ ಭಾರೀ ಮಳೆ…!

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮುಂದಿನ ಮೂರು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳು ಹಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ನವೆಂಬರ್ 5 ರಿಂದ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ನವೆಂಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು,ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.