Saturday, 14th December 2024

ಸೆ.26ರಂದು ಬೆಂಗಳೂರು ಬಂದ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ನಗರದಲ್ಲಿ ಪ್ರತಿಭಟನೆ ವ್ಯಾಪಕ ವಾಗಿ ವ್ಯಕ್ತವಾಗಿದೆ.

ಈ ಹಿನ್ನಲೆಯಲ್ಲಿ ಸೆ.26ರಂದು ಬೆಂಗಳೂರು ಬಂದ್ ಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಘೋಷಣೆ ಮಾಡಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ರೈತರ ಕಾವೇರಿ ನೀರು ಬಿಡುಗಡೆ ವಿರೋಧಿಸಿದ ಪ್ರತಿಭಟನೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಪದೇ ಪದೇ ಕಾವೇರಿ ನೀರು ಬಿಡುವು ದಿಲ್ಲ ಅಂತ ಹೇಳಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸೋದನ್ನು ಖಂಡಿಸಿ ಸೆ.26ರಂದು ಬೆಂಗಳೂರು ಬಂದ್ ನಡೆಸಲಾಗುತ್ತದೆ.

ಅಂದು ಶಾಲಾ-ಕಾಲೇಜುಗಳು ಮಕ್ಕಳಿಗೆ ತೊಂದರೆಯಾಗದಂತೆ ರಜೆ ನೀಡಬೇಕು. ಬೆಂಗಳೂರು ಜನತೆ ಸ್ವಯಂ ಪ್ರೇರಿತವಾಗಿ ಬಂದ್ ನಲ್ಲಿ ಭಾಗವಹಿಸಬೇಕು ಎಂದು ಹೇಳಿದರು.