Thursday, 12th December 2024

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಬರಗೂರು ರಾಮಚಂದ್ರಪ್ಪ

ಬೆಂಗಳೂರು : ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನವನ್ನು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ತಿರಸ್ಕರಿಸಿದ್ದಾರೆ.

ಬರಗೂರು ರಾಮಚಂದ್ರಪ್ಪ ಅವರು, ನಾನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿದ್ದೇನೆ. ಪಠ್ಯ ಪುಸ್ತಕ ಪರಿಷ್ಕರ ಣೆಗೆ ಹೊಸ ಸಮಿತಿ ರಚನೆಯಾಗಿಲ್ಲ. ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ತಾತ್ಕಲಿಕ ಸಮಿತಿ ರಚನೆ ಮಾಡಿ ಅದಕ್ಕೆ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು ಎನ್ನಲಾಗಿತ್ತು.