Saturday, 27th July 2024

ಬಿಬಿಎಂಪಿ ಚುನಾವಣೆ: ಮಾ.17ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಬಿಬಿಎಂಪಿ ಚುನಾವಣಾ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾ.17ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯ ಮೂರ್ತಿ ಅವರ ಪೀಠ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿಕೆ ಮಾಡಿದೆ.

ನಿಗದಿತ ಅವಧಿಯೊಳಗೆ ಹಾಲಿ ಇರುವ 198 ವಾರ್ಡ್‍ಗಳಿಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿತ್ತು.

ವಾರ್ಡ್‍ಗಳ ಹೆಚ್ಚಳ, ಕೆಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ವಿಷಯಗಳ ಹಿನ್ನೆಲೆ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಕೋರಿದ್ದ ಕಾಲಾವಕಾಶಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ ಇಂದು ಸರ್ಕಾರ ಅಫಿಡವಿಟ್ ಸಲ್ಲಿಸಬೇಕಾಗಿತ್ತು. ಆಯೋಗ ಮತ್ತು ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಬೇಕಾಗಿತ್ತು.

ಆದರೆ ಸರ್ಕಾರ ಈ ಸಂಬಂಧ ಸುಪ್ರೀಂಕೋರ್ಟ್ ಅಫಿಡವಿಟ್ ಇನ್ನೂ ಸಲ್ಲಿಸಿಲ್ಲ ಹಾಗಾಗಿ ಆಯೋಗ ಮತ್ತು ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಿಲ್ಲ. ಸುಪ್ರೀಂಕೋರ್ಟ್ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *

error: Content is protected !!