Friday, 13th December 2024

ರಸ್ತೆ ಅಪಘಾತ: ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವು

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ನಡೆದಿದೆ.

ಪ್ರಶಾಂತ್ ನಾಯಕ್ (27) ಮೃತ ಹೆಲ್ತ್ ಇನ್ಸ್ ಪೆಕ್ಟರ್. ಸ್ಯಾಂಕಿ ಕೆರೆಯ ಟಿ.ಚೌಡಯ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

ಪ್ರಶಾಂತ್ ರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಪುಟ್ ಪಾತ್ ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಪ್ರಶಾಂತ್ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜೆ.ಪಿ. ನಗರ ನಿವಾಸಿ ಪ್ರಶಾಂತ್ ನಾಯಕ್, ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳು ತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.