ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಶಿವಾಜಿನಗರದಲ್ಲಿ 80 ಮಕ್ಕಳು ಓದುತ್ತಿದ್ದ ಬಿಬಿಎಂಪಿ ಇಂಗ್ಲಿಷ್ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಬೆಳಿಗ್ಗೆ ಮೂರು ಗಂಟೆ ಸುಮಾರಿಗೆ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ.
75 ವರ್ಷ ಹಳೆಯದಾದ ಈ ಶಾಲೆಯಲ್ಲಿ 80 ಮಕ್ಕಳು ಓದುತ್ತಿದ್ದಾರೆ. ನಿತ್ಯ ಶಾಲೆಗೆ 75 ಮಕ್ಕಳು ಬರುತ್ತಾರೆ. ಬೆಳಗಿನ ಜಾವ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಮಕ್ಕಳು ಶಾಲೆಯಲ್ಲಿ ಇರಲಿಲ್ಲ.
ಬೆಳಿಗಿನ ಜಾವ ಈ ಘಟನೆ ನಡೆದಿದ್ದರಿಂದ ಭಾರೀ ದೊಡ್ಡ ಅನಾಹುತ ತಪ್ಪಿದೆ. ಕಳೆದ ಶನಿವಾರ ಈ ಶಾಲೆಗೆ ಮಕ್ಕಳು ಆಗಮಿಸಿದ್ದರು. ಘಟನೆ ನಡೆದ ಸಂದರ್ಭದಲ್ಲಿ ಸಿಬ್ಬಂದಿಗಳು ಯಾರೂ ಕೂಡ ಶಾಲೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಶಾಲೆ ಏಕಾಏಕಿ ಕುಸಿದು ಬಿದ್ದಿದ್ದರಿಂದ ಅಕ್ಕಪಕ್ಕದಲ್ಲಿ ನಿಲ್ಲಿಸಿದ ವಾಹನಗಳಿಗೆ ಹಾನಿಯಾಗಿದೆ. ಕಾರುಗಳ ಕಿಟಕಿ ಗಾಜುಗಳು ಒಡೆದು ಹೋಗಿದೆ.
ಜೆಸಿಬಿಯಿಂದ ತೆರವು ಕಾರ್ಯಚರಣೆ ನಡೆದಿದೆ. ಈ ದುರಂತದಿಂದ 80 ಮಕ್ಕಳು ಪಾರಾಗಿದ್ದು ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.