Sunday, 28th April 2024

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಕಲ ಸಿದ್ದತೆ: ಬಿ.ಸಿ.ನಾಗೇಶ್

ಬೆಂಗಳೂರು : ಆಗಸ್ಟ್ -ಸೆಪ್ಟೆಂಬರ್ ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಆ.19 ಸೆಪ್ಟೆಂಬರ್‌ 3ರ ವರೆಗೆ ಪರೀಕ್ಷೆಗಳು ನಡೆಯಲಿದ್ದು ಈ ಸಂಬಂಧ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿ ಗಳೊಂದಿಗೆ ತಮ್ಮ ವಿಧಾನಸೌಧದ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಬಿ.ಸಿ.ನಾಗೇಶ್ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು. ರಾಜ್ಯದಲ್ಲಿ ಒಟ್ಟು 5546 ಕಾಲೇಜುಗಳಿಂದ 18414 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಇದಕ್ಕಾಗಿ 187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಪೂರ್ವಸಿದ್ಧತೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಹೇಳಿದರು. ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿ ದರು.

ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಆರ್.ಉಮಾಶಂಕರ್,ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾದ ಸ್ನೇಹಲ್ ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು

 

Leave a Reply

Your email address will not be published. Required fields are marked *

error: Content is protected !!