Thursday, 19th September 2024

Bengaluru Power Cut: ಸೆ.17 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru power cut

ಬೆಂಗಳೂರು: ಬೆಂಗಳೂರು ನಗರದ 220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾರ್ಯಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಸೆ.17 ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Gold Rate: ಮತ್ತೆ ಹೆಚ್ಚಾಯ್ತು ಚಿನ್ನದ ದರ ; ಇಂದಿನ ಬೆಲೆ ಚೆಕ್‌ ಮಾಡಿ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಜಯಮಹಲ್ ವಿಸ್ತರಣೆ, ನಂದಿ ದುರ್ಗ, ದೂರದರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ.ನಗರ, ಮಾರಪ್ಪ ಗಾರ್ಡನ್‌, ಚಿನಪ್ಪ ಗಾರ್ಡನ್, ಎನ್.ಡಿ.ರಸ್ತೆ, ಏರ್‌ಟೆಲ್, ದೂರದರ್ಶನ.

ಈ ಸುದ್ದಿಯನ್ನೂ ಓದಿ | Bigg Boss Kannada 11: ಬಿಗ್‌ಬಾಸ್‌ನಲ್ಲೂ ಹೊಸ ಅಧ್ಯಾಯ; ನಿರೂಪಕ ಯಾರಾಗ್ತಾರೆ ಎನ್ನುವ ಕುತೂಹಲಕ್ಕೆ ಕೊನೆಗೂ ತೆರೆ

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *