Sunday, 28th April 2024

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ಮೀಸಲು

ಬೆಂಗಳೂರು: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಫೆ. 17ರಂದು ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಅದಕ್ಕೂ ಮೊದಲೇ ಮೋದಿ ಸರ್ಕಾರ ಕರ್ನಾಟಕಕ್ಕೆ ಹಲವು ಯೋಜನೆ ಗಳನ್ನು ಘೋಷಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಹಣವನ್ನು ಮೀಸಲಿಟ್ಟಿರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ ಸುಮಾರು 2.25 ಲಕ್ಷ ಹೆಕ್ಟೇರ್‌ಗೆ ಸುಮಾರು 19 ಟಿಎಂಸಿ ಅಡಿ ನೀರು ನೀರಾವರಿಯನ್ನು ಒದಗಿಸುತ್ತದೆ.

ಎಲ್ಲ ರಾಜ್ಯಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲವನ್ನು ಮುಂದುವರೆಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ರಾಜ್ಯಗಳ ಬಂಡವಾಳ ವೆಚ್ಚದ ಮಿತಿಯನ್ನು 1.3 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ.

 
Read E-Paper click here

error: Content is protected !!