Saturday, 23rd November 2024

ಮೌನ ಪ್ರತಿಭಟನೆಯಲ್ಲಿ ನಟಿ ಭಾವನಾಗೆ ತರಾಟೆ

ಬೆಂಗಳೂರು: ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳ ವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ನಟಿ ಭಾವನಾಗೆ ಮಹಿಳಾ ಕಾರ್ಯ ಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿಕೆಶಿ ಕುರ್ಚಿಪಕ್ಕದಲ್ಲಿ ಕುಳಿತುಕೊಳ್ಳಲು ಹೋಗಿದ್ದ ಭಾವನಾಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತೆ ಯೊಬ್ಬರು, ‘ನೀವು ಬಿಜೆಪಿಯಲ್ಲಿದ್ರಿ ತಾನೇ? ಇವಾಗ ಇಲ್ಲಿಗೆ ಬಂದು ಅಧ್ಯಕ್ಷರ ಪಕ್ಕದಲ್ಲಿ ಕೂರೋಕೆ ಹೋಗ್ತಿದ್ದೀರಲ್ಲಾ?’ ಎಂದು ತರಾಟೆಗೆ ತೆಗೆದುಕೊಂಡರು. ಗಲಿಬಿಲಿಯಾಗಿ ಸಮಾಧಾನ ಮಾಡಲು ಮುಂದಾದ ನಟಿ ಭಾವನಾ ಮುಜುಗರಕ್ಕೆ ಒಳಗಾದರು.

ನಟಿ ಭಾವನಾ, ನಾನು ಕಾಂಗ್ರೆಸ್ ತೊರೆದು ಹೋಗಿದ್ದಕ್ಕೆ ಪಶ್ಚಾತ್ತಾಪ ಉಂಟಾ ಯಿತು. ಕೆಲವೊಂದು ಕಾರಣದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೆ. ಕಳೆದ ನಾಲ್ಕು ತಿಂಗಳ ಹಿಂದೆ ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದೇನೆ. ಯಾವುದೇ ಸ್ಥಾನ-ಮಾನದ ನೀರಿಕ್ಷೆ ನನಗೆ ಇಲ್ಲ. ಸಿದ್ದಾಂತದ ಆಧಾರದ ಮೇಲೆ ಕಾಂಗ್ರೆಸ್​ನಲ್ಲಿ ಕೆಲಸ ಮಾಡುತ್ತೇನೆ ಎಂದರು.

ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ನಟಿ ಭಾವನಾ, ನಾನು ಕಾಂಗ್ರೆಸ್ ತೊರೆದು ಹೋಗಿದ್ದಕ್ಕೆ ಪಶ್ಚಾತ್ತಾಪ ಉಂಟಾಯಿತು. ಕೆಲವೊಂದು ಕಾರಣ ದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೆ. ಕಳೆದ ನಾಲ್ಕು ತಿಂಗಳ ಹಿಂದೆ ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದೇನೆ. ಯಾವುದೇ ಸ್ಥಾನ-ಮಾನದ ನೀರಿಕ್ಷೆ ನನಗೆ ಇಲ್ಲ. ಸಿದ್ದಾಂತದ ಆಧಾರದ ಮೇಲೆ ಕಾಂಗ್ರೆಸ್​ನಲ್ಲಿ ಕೆಲಸ ಮಾಡುತ್ತೇನೆ ಎಂದರು.