Sunday, 15th December 2024

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

bhavani revanna

ಬೆಂಗಳೂರು: ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಿಚಾರಣೆ ನಡೆಸಿದ ಹೈಕೋರ್ಟ್‌ , ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಪೊಲೀಸರಿಗೆ ಬೇಕಾದ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ ಕೋರ್ಟ್‌ ಹೇಳಿದೆ.

ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ; ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ ಆದೇಶವನ್ನು ಹೈಕೋರ್ಟ್ ಪ್ರಕಟಿಸಿದೆ