Sunday, 28th April 2024

ಸಾವಿನಲ್ಲೂ ಸುಳ್ಳು ಹೇಳಿಕೊಂಡು ತಿರುಗುವ ಬಿಜೆಪಿಗರು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಕರೋನಾ ಪರಿಹಾರ ಘೋಷಣೆ ರದ್ದು ಮಾಡಿರುವ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಕೂ ಮಾಡಿರುವ ಪ್ರಿಯಾಂಕ್ ಖರ್ಗೆ, ‘ ಕರೋನಾದಿಂದ ಮೃತಪಟ್ಟವರಿಗೆ ಈಗಾ ಗಲೇ ₹1 ಲಕ್ಷ ಪರಿಹಾರ ನೀಡಲಾಗಿದೆ ಎಂದು ಹೇಳುವ ಸಚಿವರು. ಪರಿಹಾರ ಇನ್ನೂ ಕೊಟ್ಟಿಲ್ಲ, ಕೊಟ್ಟೇ ತೀರುತ್ತೇವೆ ಎನ್ನುವ ಮಾಜಿ ಮುಖ್ಯಮಂತ್ರಿಗಳು.ಇದೆಲ್ಲದರ ನಡುವೆ ಪರಿಹಾರ ಘೋಷಣೆಯ ಆದೇಶವನ್ನೇ ರದ್ದು ಮಾಡಿದ ರಾಜ್ಯ ಸರ್ಕಾರ. ಸಾವಿನಲ್ಲೂ ಸುಳ್ಳು ಹೇಳಿಕೊಂಡು ತಿರುಗುವ ಬಿಜೆಪಿಗರು’ ಎಂದು ಹೇಳಿದ್ದಾರೆ.

‘ಸರ್ಕಾರಗಳು ಪ್ರಕೃತಿ ವಿಕೋಪದ ನಿಯಮಗಳಡಿ, ಕೋವಿಡ್-19 ಸಾಂಕ್ರಾಮಿಕವನ್ನು ನಿರ್ವಹಿಸುತ್ತಿವೆ. ಪ್ರಾಕೃತಿಕ ವಿಕೋಪ ಗಳಾದ ಮಳೆ, ಗಾಳಿ, ಸಿಡಿಲು, ಗುಡುಗು, ಭೂ ಕುಸಿತ, ಭೂಕಂಪ ಮುಂತಾದವುಗಳಿಂದ ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂಪಾಯಿ ಗಳನ್ನು ಪರಿಹಾರವಾಗಿ ನೀಡಲಾಗುತ್ತದೆ. ಆದರೆ ಸೆ.28ರಂದು ಹೊರಡಿಸಿರುವ ಆದೇಶದಲ್ಲಿ ಬಿಪಿಎಲ್ ಕಾರ್ಡ್‌ ಹೊಂದಿ ರುವ ಕುಟುಂಬಗಳ ದುಡಿಯುವ ವ್ಯಕ್ತಿ ಕೋವಿಡ್‌ನಿಂದ ಮೃತ ಪಟ್ಟರೆ ರಾಜ್ಯದ ಸಂಧ್ಯಾ ಸುರಕ್ಷಾ ಯೋಜನೆಯಡಿ ರೂ. 1 ಲಕ್ಷ, ಕೇಂದ್ರ ಸರ್ಕಾರದಿಂದ ರೂ. 50,000 ನೀಡುವುದಾಗಿ ಆದೇಶ ಹೊರಡಿಸಲಾಗಿದೆ’ ಎಂದಿದ್ದಾರೆ.

ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರ, ತಂದೆ ತಾಯಿಯರಿಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಭವಿಷ್ಯವನ್ನೇ ನಾಶ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು

Leave a Reply

Your email address will not be published. Required fields are marked *

error: Content is protected !!