ಇದೀಗ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ಅಂಕಿತ ಹಾಕಿದ್ದಾರೆ.
ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು.
ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿ ದ್ದರು. ಈ ಮೂಲಕ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ.