Friday, 13th December 2024

ಡಿ.ಕೆ.ಶಿ ಒಡೆತನದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ಆರ್‌ಆರ್ ನಗರದಲ್ಲಿರುವ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.

ಆರ್‌ಆರ್‌ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಒಡೆತನ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಭಾನುವಾರ ಸಂಜೆ ಕಿಡಿಗೇಡಿಗಳು ಮೇಲ್ ಕಳಿಸಿದ್ದು, ಸೋಮವಾರ ಈ-ಮೇಲ್ ಪರಿಶೀಲನೆ ವೇಳೆ ಬೆದರಿಕೆ ಹಾಕಿರುವುದು ಕಂಡು ಬಂದಿದೆ. ಬೆದರಿಕೆ ಸಂದೇಶ ಪತ್ತೆಯಾಗುತ್ತಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳನ್ನು ಶಾಲೆ ಯಿಂದ ಹೊರಗೆ ಕಳುಹಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.