Saturday, 14th December 2024

ಡಿ.24-28 ರವರೆಗೆ ಘಾಟಿ ಸುಬ್ರಮಣ್ಯ ದೇವಾಲಯ ಬ್ರಹ್ಮರಥೋತ್ಸವ

ಬೆಂಗಳೂರು: ಪುರಾಣ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯ ಬ್ರಹ್ಮರಥೋತ್ಸವಕ್ಕೆ ಸಿದ್ಧವಾಗುತ್ತಿದೆ. ಭಕ್ತರಿಗೆ ಅಗತ್ಯ ಸೌಲಭ್ಯ ಗಳನ್ನು ಕಲ್ಪಿಸಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ಲತಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಸಿದ್ಧತೆ ಸಭೆ ನಡೆಯಿತು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 24 ರಿಂದ 28 ರವರೆಗೆ ನಡೆಯಲಿದೆ. ಸುಬ್ರಮಣ್ಯ ಸ್ವಾಮಿಯ ಬ್ರಹ್ಮರಥೋ ತ್ಸವವು ಡಿ.28ರಂದು ನಡೆಯಲಿದೆ.

‘ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ, ಜಾತ್ರೆ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸ ಲಾಗಿದೆ. ಡಿ.20 ರಿಂದ ಆರಂಭಗೊಳ್ಳಬೇಕಿದ್ದ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದನಗಳ ಜಾತ್ರೆ ಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.