Friday, 13th December 2024

ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸುತ್ತಿದ್ದಾರೆ: ಬಿಎಸ್‌ವೈ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ನಡೆಯುತ್ತಿರುವ ಜಗಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸುತ್ತಿದ್ದಾರೆ ಎಂದು ವ್ಯಂಗ್ಯ ವಾಡಿದ್ದಾರೆ.

ಕಾಂಗ್ರೆಸ್ ನವರಿಗೆ ಒಂದು ಮಾತು ಹೇಳಲು ಇಚ್ಛಿಸುತ್ತೇನೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸಿದ ರೀತಿಯಲ್ಲಿ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೆ. ಯಾವ ಕಾರಣಕ್ಕೂ ಅವರು ಮುಖ್ಯಮಂತ್ರಿ ಯಾಗಲು ನಾವು ಬಿಡುವುದಿಲ್ಲ. ಬಿಜೆಪಿಯವರೇ ರಾಜ್ಯದ ಮುಖ್ಯಮಂತ್ರಿಯಾಗುವುದು. ನೂರಕ್ಕೆ ನೂರು ಬಹುಮತದಿಂದ ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ.

ಕೆ.ಆರ್. ಪೇಟೆಯಲ್ಲಿ ಬಹಳ ಶ್ರಮ ಹಾಕಿ ವಿಜಯೇಂದ್ರ ಪ್ರಯತ್ನದಿಂದ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಈಗ ನಾರಾಯಣ ಗೌಡರು ಜಿಲ್ಲೆಯಲ್ಲಿ ಮೂರ್ನಾಲ್ಕು ಕ್ಷೇತ್ರ ಗೆಲ್ಲುವ ವಾತಾ ವರಣ ಸೃಷ್ಟಿ ಮಾಡಿದ್ದಾರೆ. ಹೀಗಾಗಿ ಬಹಳ ದೊಡ್ಡ ಪ್ರಮಾಣದಲ್ಲಿ ಇಂದು ಸಭೆ ಆಗುತ್ತಿದೆ ಎಂದು ಹೇಳಿದರು.