Monday, 13th May 2024

ಬೆಂಗಳೂರು ತಂತ್ರಜ್ಞಾನ ಮೇಳ-2020 ಇಂದು ಉದ್ಘಾಟನೆ

ಬೆಂಗಳೂರು: ಕೋವಿಡ್ ಸವಾಲಿನ ನಡುವೆ ವರ್ಚ್ಯುಯಲ್ ಆಗಿ ನಡೆಯಲಿರುವ ಭಾರತದ ಮಹತ್ವದ ತಾಂತ್ರಿಕ ಕಾರ್ಯಕ್ರಮ ‘ಬೆಂಗಳೂರು ತಂತ್ರಜ್ಞಾನ ಮೇಳ-2020 (ಬಿಟಿಎಸ್-2020)’ ವನ್ನು ಬೆಳಿಗ್ಗೆ 11ಗಂಟೆಗೆ ವಿಡಿಯೋ ಕಾನ್ಫರೆನ್ಸ್​​ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಮೂರು ದಿನಗಳ ಈ ಮೇಳವನ್ನು ಜನೋಪಯೋಗಕ್ಕೆ ತಂತ್ರಜ್ಞಾನ ಬಳಸುವ ಬಗ್ಗೆ ಪ್ರಧಾನಿ ಮೋದಿ ಸ್ವತಃ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಸ್ವಿಸ್​ ಗಣರಾಜ್ಯದ ಉಪ ರಾಷ್ಟ್ರಾಧ್ಯಕ್ಷ ಗೈ ಪರ್ಮೆಲಿನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕೇಂದ್ರ ಸರ್ಕಾರದ ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಆನ್ ಲೈನ್ ಮೂಲಕ ಪಾಲ್ಗೊಳ್ಳಲಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಐಟಿ/ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವ ಜಗದೀಶ್ ಶೆಟ್ಟರ್ ಸಮಾರಂಭದಲ್ಲಿ ಹಾಜರಿರಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!