Wednesday, 11th December 2024

ಆಗಸ್ಟ್’ನಲ್ಲಿ ಗೃಹಜ್ಯೋತಿ ಯೋಜನೆ ಜಾರಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಶುಕ್ರವಾರ 14 ನೇ ಬಾರಿ ಬಜೆಟ್ ಮಂಡಿಸಿದರು.

ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಧಿಕೃತ ವಾಗಿ ಜಾರಿಗೆ ಬರಲಿದೆ.

ಅನುಗ್ರಹ ಯೋಜನೆ ಮರು ಜಾರಿ ಮಾಡಲಾಗುವುದು, ರೈತರಿಗೆ 3 ರಿಂದ 5 ಲಕ್ಷ ರೂ. ವರೆಗೆ ಅಲ್ಪಾವಧಿ ಸಾಲ ನೀಡಲಾಗುವುದು. ಮೈಸೂರು-ಕಲಬುರಗಿಯಲ್ಲಿ ಟ್ರಾಮಾ ಸೆಂಟರ್ ಗೆ ಅನುದಾನ, ನಮ್ಮ ಮೆಟ್ರೋಗೆ 30,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಅನುದಾನ ನೀಡಲಾಗುವುದು, ಬ್ರ್ಯಾಂಡ್ ಬೆಂಗಳೂರಿಗೆ ಬಂಪರ್ ಗಿಫ್ಟ್ ನೀಡಲಾ ಗಿದ್ದು, ನಮ್ಮ ಮೆಟ್ರೋಗೆ 30,000 ಕೋಟಿ ರೂ. ಅನುದಾನ ನೀಡಲಾಗಿದೆ. 45 ಸಾವಿರ ಕೋಟಿ ಅನುದಾನ ನೀಡಲಾಗಿದೆ. ವೈಟ್ ಟಾಪಿಂಗ್, ರಸ್ತೆಅಭಿವೃದ್ಧಿ, ತ್ಯಾಜ ವಿಲೇವಾರಿ, ಮೆಟ್ರೋ ಉಪನಗರ ರೈಲಿಗೆ 30 ಸಾವಿರ ಕೋಟಿ ರೂ. ನಿಯೋಜನೆ ಮಾಡಲಾಗಿದೆ ಎಂದರು.