ಬೆಂಗಳೂರು: ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಜಂಟಿ ಕಲಾಪದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
ಜು.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸಲಿದ್ದಾರೆ. ಬಿಜೆಪಿ ವಿವಾದಿತ ತಿದ್ದುಪಡಿ ಕಾಯ್ದೆ ಗಳ ರದ್ದು, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಆರೋಪ ಪ್ರತ್ಯಾರೋಪ ಸೇರಿ ಹಲವು ವಿಚಾರಗಳ ಬಗ್ಗೆ ಅಧಿವೇಶನ ದಲ್ಲಿ ಚರ್ಚೆ ನಡೆಯಲಿದೆ.
ವಿವಾದಿತ ತಿದ್ದುಪಡಿ ಕಾಯ್ದೆಗಳ ರದ್ದು ಮಾಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುವ ಸಾಧ್ಯತೆ ಇದೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 8 ದಿನ ಪ್ರಶ್ನೋತ್ತರ ಕಲಾಪ ನಿಗದಿಯಾಗಿದೆ