Wednesday, 29th May 2024

ನನಗೆ ಹಿಂದಿ ಅರ್ಥವಾಗುವುದಿಲ್ಲ, ಅದಕ್ಕೆ ಸಿನಿಮಾ ನೋಡುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ದಿ ಕಾಶ್ಮೀರ ಫೈಲ್ಸ್​ ಚಿತ್ರಕ್ಕೆ ನೀವು ಹೋಗುವುದಿಲ್ಲವೇ ಸರ್​? ಎಂದು ಅಲ್ಲಿದ್ದವರು ಪ್ರಶ್ನಿಸಿದಾಗ ನಾನು ಚಿತ್ರ ಮಂದಿರದಲ್ಲಿ ಸಿನಿಮಾ ನೋಡಿ ಎಷ್ಟೋ ವರ್ಷಗಳಾಗಿವೆ. ಏಕ್​ ಲವ್​ ಯಾ ಸಿನಿಮಾ ವನ್ನು ಪೂರ್ತಿ ನೋಡಲಿಲ್ಲ. ನನಗೆ ಹಿಂದಿ ಅರ್ಥವಾಗುವುದಿಲ್ಲ, ಅದಕ್ಕೆ ಸಿನಿಮಾ ನೋಡುವುದಿಲ್ಲ ಎಂದು ಹೇಳಿ ಹೊರಟರು.

ಮಾ.15 ರಂದು ಸಂಜೆ 6.45ಕ್ಕೆ ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ಸಚಿವರು, ಶಾಸಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನೋಡಲು ವಿಧಾನಸಭೆ ಸಚಿವಾಲಯದಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ವನ್ನು ನೋಡುವುದಿಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಅವರು ಕಾರಣವನ್ನು ನೀಡಿದ್ದಾರೆ.

ದೇಶದೆಲ್ಲಡೆ ಹೌಸ್​ಫುಲ್ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ಕರ್ನಾಟಕದ ಸಚಿವರು, ಶಾಸಕರು ಕೂಡ ವೀಕ್ಷಣೆ ಮಾಡಲಿದ್ದಾರೆ. ಅದಕ್ಕಾಗಿ ವಿಶೇಷ ವ್ಯವಸ್ಥೆಯನ್ನು ಸ್ವತಃ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಮಾಡಿ ದ್ದಾರೆ.

1990 ರಲ್ಲಿ ಕಾಶ್ಮೀರಿ ಪಂಡಿತರ ನರಮೇಧದ ಕಥೆಯನ್ನು ಆಧರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆಯೇ ಸದ್ಯ ಇಡೀ ಭಾರತ ದೇಶದಲ್ಲಿ ಮಾತುಕತೆ ನಡೆಯುತ್ತಿದೆ.

ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆನ್ನೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿದ್ದಾರೆ. ಚಿತ್ರವನ್ನು ವೀಕ್ಷಸಿ ದಿಲ್ ಖುಷ್ ಆಗಿರುವ ಸಿಎಂ ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ನಮ್ಮ ರಾಜ್ಯದ ಚಿತ್ರಮಂದಿರಗಳಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

error: Content is protected !!