Saturday, 5th October 2024

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಾಳೆಯಿಂದ ಪ್ರಕ್ರಿಯೆ ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ರ್ಯಾಂಕಿಂಗ್ ಅನ್ವಯ ಅ. 10 ರಿಂದ ಪ್ರಕ್ರಿಯೆ ಆರಂಭವಾಗಲಿವೆ.

ಅ. 10 ರಂದು ಬೆಳಿಗ್ಗೆ 11 ಗಂಟೆ ನಂತರ ಕೋರ್ಸ್ ವಾರು ಸಿಟು ಲಭ್ಯತೆ ಹಾಗೂ ಶುಲ್ಕದ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು. ವೆಬ್ಸೈಟ್ ನಿಂದ ಪರಿಶೀಲನೆ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಅ. 11 ರಂದು ಮಧ್ಯಾಹ್ನ 2 ಗಂಟೆಯಿಂದ 13 ರಂದು ಸಂಜೆ 4 ಗಂಟೆಯೊಳಗೆ ಅರ್ಹ ಅಭ್ಯರ್ಥಿಗಳು ತಮ್ಮ ಇಚ್ಛೆಯ ಆಯ್ಕೆ ಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು.

ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಇನ್ನಿತರ ದಾಖಲೆಗಳನ್ನು ಸಲ್ಲಿಸದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆಗೆ ಅಕ್ಟೋಬರ್ 11 ರಂದು ಬೆಳಗ್ಗೆ 9:30ಕ್ಕೆ ಪ್ರಾಧಿ ಕಾರದ ಕಚೇರಿಗೆ ಹಾಜರಾಗಲು ಕೊನೆಯ ಅವಕಾಶ ನೀಡಲಾಗಿದೆ.