Monday, 16th September 2024

ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ಜೀವನಾಂಶ ನೀಡಲು ಸಾಧ್ಯವಿಲ್ಲ

ಬೆಂಗಳೂರು: ವಿವಾಹವಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ.

ಚಿಕ್ಕಮಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿ ನಲ್ ಪುನರ್‌ಪರಿಶೀಲನಾ ಅರ್ಜಿ ವಿಚಾ ರಣೆ ನಡೆಸಿದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರಿದ್ದ ನ್ಯಾಯಪೀಠ ಈ ರೀತಿ ಅಭಿಪ್ರಾಯಪಟ್ಟಿದ್ದು, ಅರ್ಜಿ ವಜಾಗೊಳಿಸಿತು.

ಅರ್ಜಿದಾರರು ಅಕ್ರಮ ಸಂಬಂಧ ಹೊಂದಿದ್ದು, ಪ್ರಾಮಾಣಿಕರಲ್ಲದಿದ್ದಾಗ ಪತಿಯಿಂದ ಜೀವನಾಂಶ ನೀಡಬೇಕು ಎಂಬ ವಾದ ಒಪ್ಪಿಕೊಳ್ಳುವುದಿಲ್ಲ. ಪತಿಯ ಕಡೆಯಿಂದ ಯಾವುದೇ ನಿರೀಕ್ಷೆ ಮಾಡಬಾರದು ಎಂದು ತಿಳಿಸಿದೆ.

ಅರ್ಜಿದಾರರು ಮತ್ತೊಬ್ಬ ವ್ಯಕ್ತಿಯೊಂದಿಗೆ ಓಡಿಹೋಗಿರುವ ಸಂಬಂಧ ದೂರು ದಾಖಲಾಗಿದ್ದು, ತನಿಖೆ ವೇಳೆ ಆಪ್ತನೊಂದಿಗೆ ನೆಲೆಸಲು ಇಚ್ಚಿಸುತ್ತಿದ್ದಾರೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಇದೇ ಆಧಾರದಲ್ಲಿ ವಿಚ್ಛೇದ ನವೂ ಮಂಜೂರಾಗಿದೆ. ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿಲ್ಲ. ಈ ಸಂಬಂಧ ಹಿಂದೊಮ್ಮೆ ರಾಜಿ ಪಂಚಾಯತಿ ನಡೆಸಿದ ಬಳಿಕ ಗಂಡನ ಮನೆಗೆ ಕಳುಹಿಸಲಾಗಿತ್ತು. ಆದರೂ, ಅವರು ಗಂಡನನ್ನು ಬಿಟ್ಟು ಮತ್ತೊಬ್ಬ ವ್ಯಕ್ತಿ ಯೊಂದಿಗೆ ಸಹಜೀವನ ನಡೆಸುತ್ತಿದ್ದಾರೆ ಎಂಬುದಾಗಿ ಆಕೆಯ (ಅರ್ಜಿದಾರಳ) ಸಹೋದರ ತಿಳಿಸಿದ್ದಾರೆ.

ಅರ್ಜಿದಾರರನ್ನು ಪಾಟಿ ಸವಾಲಿಗೆ ಒಳಪಡಿಸಿದಾಗ ಜೀವನ ನಡೆಸುವುದಕ್ಕಾಗಿ ಯಾವುದೇ ಆದಾಯದ ಮೂಲಗಳಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಸಾಕ್ಷಿಗಳ ಪ್ರಕಾರ ಮತ್ತೊಂದು ವ್ಯಕ್ತಿಯೊಂದಿಗೆ ನೆಲೆಸಿದ್ದು, ಅವರೇ ಜೀವನ ನೋಡಿಕೊಳ್ಳುತ್ತಿದ್ದಾರೆ. ಎಲ್ಲ ಸಂದರ್ಭಗಳಲ್ಲಿಯೂ ಅವನೊಟ್ಟಿಗೆ ಇರುತ್ತಿರುವ ಅಂಶ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ.  ಇದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ ನ್ಯಾಯಪೀಠ ಪುನರ್‌ ಪರಿಶೀಲನಾ ಅರ್ಜಿ ವಜಾಗೊಳಿಸಿತು.

ಚಿಕ್ಕಮಗಳೂರು ಜಿಲ್ಲೆಯ ರಾಮನಹಳ್ಳಿಯ ವ್ಯಕ್ತಿ ಅದೇ ಜಿಲ್ಲೆಯ ರತ್ನಕೋಟೆ ಎಂಬ ಗ್ರಾಮದ ಮಹಿಳೆಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದರು.

Leave a Reply

Your email address will not be published. Required fields are marked *