Sunday, 8th September 2024

ಅವಧಿ ಮೀರಿದ ಇಂಜೆಕ್ಷನ್: 2 ವರ್ಷದ ಮಗು ಸಾವು

ಬೆಂಗಳೂರು: ಅವಧಿ ಮೀರಿದ ಇಂಜೆಕ್ಷನ್ ನೀಡಿ 2 ವರ್ಷದ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗುವಂತೆ ಮಾಡಿದ್ದ ಆರೋಪದಡಿ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಜ್ವರದಿಂದ ಬಳಲುತ್ತಿದ್ದ ಎರಡು ವರ್ಷದ ಮಗು ಯಾದ್ವಿಯನ್ನು ಅಕ್ಟೋಬರ್ 29 ರಂದು ಆಕೆಯ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಯ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಡ್ರಿಪ್ಸ್ ಮೂಲಕ ಇಂಜೆಕ್ಷನ್ ನೀಡಿದ್ದು, ನಂತರ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದೆ.

ತುಟಿಯ ಭಾಗದಲ್ಲಿ ರಕ್ತ ಕಾಣಿಸಿಕೊಂಡಿದೆ. ಆತಂಕಗೊಂಡ ಪೋಷಕರು ತಕ್ಷಣ ಬೇರೆ ಆಸ್ಪತ್ರೆಗೆ ಮಗುವನ್ನು ಸ್ಥಳಾಂತರಿಸಿದ್ದಾರೆ. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಹಣದ ಆಮಿಷವೊಡ್ಡಿರುವ ಆರೋಪವೂ ಕೇಳಿಬಂದಿದೆ. ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ವಿರುದ್ಧ ಮಗುವಿನ ತಂದೆ ಕಿರಣ್ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂಜೀವಿನಿ ಆಸ್ಪತ್ರೆ ಮಕ್ಕಳ ತಜ್ಞೆ ಡಾ.ಸಹನಾ ”ಮಗುವಿಗೆ ಅವಧಿ ಮೀರಿದ ಚುಚ್ಚು ಮದ್ದು ಕೊಟ್ಟಿರುವುದು ನಿಜ. ಡ್ರಿಪ್ಸ್​ನಿಂದ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ. ಅದಕ್ಕಾಗಿ ನಾವು ಕ್ಷಮೆ ಕೇಳುತ್ತೇವೆ. ಸಂಬಂಧಪಟ್ಟ ಸಿಬ್ಬಂದಿಯನ್ನು ಕೆಲಸದಿಂದ ಅಮಾನುತುಗೊಳಿಸಲಾಗಿದೆ” ಎಂದು ಹೇಳಿದ್ದರು.

 

Leave a Reply

Your email address will not be published. Required fields are marked *

error: Content is protected !!