Thursday, 12th December 2024

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪಗೆ ಕ್ಲೀನ್ ಚಿಟ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ-ರಿಪೋರ್ಟ್ ನಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾ ಗುವ ಮುನ್ನ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು.

ಈಶ್ವರಪ್ಪ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡುವ ಮೂಲಕ, ಗುತ್ತಿಗೆ ದಾರ ಸಂತೋಷ್ ಪಾಟೀಲ್ ಸುದ್ದಿ ಯಾಗಿದ್ದರು. ಇದೇ ಕಾರಣದಿಂದ ಅವರು ಪ್ರಧಾನಿ, ಸೇರಿದಂತೆ ಕೇಂದ್ರ ಸಚಿವರಿಗೂ ಗುತ್ತಿಗೆ ಕಮೀಷನ್ ವಿರುದ್ಧ ದೂರು ನೀಡಿದ್ದರು. ಬಳಿಕ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

ಇದೇ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡುವಂತೆ ಆಗಿತ್ತು. ತನಿಖೆ ನಡೆಸಿದ ಉಡುಪಿಯ ಪೊಲೀಸರು, ಈಶ್ವರಪ್ಪ ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಗಳಿಲ್ಲ ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ.

ಈ ಮೂಲಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ.