Sunday, 28th April 2024

ಬಂದ್‌ ಕರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5 ರಂದು ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‌ ಕರೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ರಾಜ್ಯದಲ್ಲಿರುವ ಮರಾಠಿಗರೂ ಸಹ ನಮ್ಮ ಕನ್ನಡಿಗರಿದ್ದಾರೆ. ಈ ಮರಾಠಿ ಗರ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲಾಗಿದೆ. ಪ್ರಾಧಿಕಾರ ರಚನೆ ವಿರೋಧಿಸಿ ಬಲವಂತದ ಬಂದ್ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಮರಾಠಿ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

Leave a Reply

Your email address will not be published. Required fields are marked *

error: Content is protected !!