Sunday, 28th April 2024

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಯಕ್ಷಗಾನ ಕ್ಷೇತ್ರದಲ್ಲಿ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃಗಳೂ ಆಗಿದ್ದ ಪ್ರೊ.ಹೆಗಡೆ ಅವರು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಯಕ್ಷಗಾನವನ್ನು ಇನ್ನಷ್ಟು ಜನಪ್ರಿಯ ಗೊಳಿಸಲು ಹಾಗೂ ಕಲಾವಿದರ ಹಿತರಕ್ಷಣೆಗೆ ಶ್ರಮಿಸಿದ್ದರು. ಸಂಸ್ಕೃತ ವಿದ್ವಾಂಸರಾಗಿದ್ದ ಅವರು ಸಂಸ್ಕೃತ ಮತ್ತು ಯಕ್ಷಗಾನ ಕುರಿತು ರಚಿಸಿದ ಕೃತಿಗಳು ಅತ್ಯಂತ ಮೌಲಿಕವಾದ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಭಗವಂತನು ಮೃತರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಹಾಗೂ ಅವರ ಕುಟುಂಬ ವರ್ಗ ಮತ್ತು ಅಭಿಮಾನಿ ಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!