Sunday, 15th December 2024

ಮೋಹನದಾಸ್ ಪೈ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು: ಹಿರಿಯ ಉದ್ಯಮಿ, ಉದಯವಾಣಿ ದಿನಪತ್ರಿಕೆಯ ಸಂಸ್ಥಾಪಕರು ಆಗಿದ್ದ ಟಿ. ಮೋಹನದಾಸ್ ಪೈ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೋಹನದಾಸ ಪೈ ಅವರು ನಿಧನ ಹೊಂದಿದ್ದಾರೆ ಎನ್ನುವ ವಿಷಯ ನನಗೆ ಆಘಾತ ಉಂಟು ಮಾಡಿದೆ. ಹಿರಿಯ ಚೇತನರು, ಎಲ್ಲರ ಮಾರ್ಗದರ್ಶಕರಂತಿದ್ದ ಟಿ. ಮೋಹನ್ ದಾಸ್ ಪೈ ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ದವರಿಗೆ ಪೈ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಕೋರಿದ್ದಾರೆ.