ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿ ಮಾತನಾಡಿದ ಬೊಮ್ಮಾಯಿ, ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯ ಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ನಾವು ನಿರ್ಧಿಷ್ಠ ಮಟ್ಟದಲ್ಲಿ ಗೆಲುವು ಸಾಧಿಸಲಾಗಲಿಲ್ಲ. ಸಂಪೂರ್ಣ ಫಲಿತಾಂಶ ಬಂದ ನಂತರ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಿ ಉತ್ತಮ ಫಲಿತಾಂಶ ತೆಗೆದು ಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು.
ಚುನಾವಣಾ ಫಲಿತಾಂಶದಲ್ಲಿ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ 120 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ. ಆಡಳಿತಾರೂಢ ಬಿಜೆಪಿ 72 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿ ಕಳೆದ ಬಾರಿಗಿಂತ ಈ ಬಾರಿ 30ಕ್ಕೂ ಅಧಿಕ ಸ್ಥಾನ ಗಳಲ್ಲಿ ಹಿನ್ನಡೆ ಅನುಭವಿಸಿದೆ.