Thursday, 3rd October 2024

ಸೆಕ್ಷನ್ 144 ಜಾರಿ: ಕೊಡಗಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ ಮುಂದೂಡಿಕೆ

ಬೆಂಗಳೂರು: ಕೊಡಗಿನಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ನಾನು ಅದನ್ನು ಉಲ್ಲಂಘಿಸುವು ದಿಲ್ಲ. ಹೀಗಾಗಿ ಪ್ರತಿಭಟನೆಯನ್ನು ಮುಂದೂಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೊಟ್ಟೆ ಎಸೆದ ಪ್ರಕರಣ, ಕೊಡಗಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ, ಕೊಡಗಿನಲ್ಲಿ ನಿಷೇಧಾಜ್ಞೆ ಸೇರಿ ಹಲವು ವಿಷಯಗಳ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸುದ್ದಿ ಗೋಷ್ಠಿ ನಡೆಸಿದರು. ಆ.26 ರಂದು ಕಾಂಗ್ರೆಸ್ ಪ್ರತಿಭಟನೆ ಮತ್ತು ಬಿಜೆಪಿಯಿಂದ ‘ಜನ ಜಾಗೃತಿ ಸಮ್ಮೇಳನ’ ಘೋಷಣೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಕೊಡಗು ಜಿಲ್ಲೆಯಲ್ಲಿ ನಾಲ್ಕು ದಿನ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಆ.24 ರ ಬೆಳಗ್ಗೆ 6 ಗಂಟೆಯಿಂದ ಆ.27 ರಂದು ಸಂಜೆ 6 ರವರೆಗೆ ಕೊಡಗು ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಿರಲಿದೆ.

‘ಪ್ರತಿಭಟನೆ ನಡೆಯುವ ಬಗ್ಗೆ ಪೊಲೀಸರಿಗೆ ಮಾಹಿತಿ ಇರಲಿಲ್ಲವೇ…ಐದು ಸ್ಥಳಗಳಲ್ಲಿ ಪ್ರತಿಭಟನೆ ನಡೆದಿದೆ. ಕಪ್ಪು ಬಾವುಟ ಪ್ರದರ್ಶನ ನಡೆದಿದೆ. ಆದರೂ ಪೊಲೀಸರು ಏನು ಮಾಡಲಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ಕೊಡಗು ಜಿಲ್ಲಾಧಿಕಾರಿ ಡಾ.ಸತೀಶ ಬಿ.ಸಿ. ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಸೋಮವಾರ ತಡರಾತ್ರಿ ಆದೇಶ ಹೊರಡಿಸಿ ದ್ದಾರೆ. ಈ ದಿನಗಳಲ್ಲಿ ಯಾವುದೇ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ಮಾಡುವುದನ್ನು ನಿಷೇಧಿಸ ಲಾಗಿದೆ. ಐದು ಮತ್ತು ಅದಕ್ಕಿಂತ ಹೆಚ್ಚಿನ ಜನರು ಒಂದೆಡೆ ಸೇರದಂತೆ ನಿರ್ಬಂಧ ವಿಧಿಸಲಾಗಿದೆ.