Sunday, 15th December 2024

ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಮಂಗಳವಾರ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮಾತನಾಡಿ, ಎಲ್ಲ ಸಮುದಾಯದ, ಎಲ್ಲ ವರ್ಗದವರ ಅಭಿವೃದ್ಧಿಗೆ ಪೂರಕ ವಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ನಮ್ಮ ಮುಖಂಡರ ಜೊತೆಗೆ ಚರ್ಚಿಸಿ ಪ್ರಣಾಳಿಕೆ ತಯಾರಿಸಿದ್ದೇವೆ. ಸರ್ವಜನಾಂಗದ ಶಾಂತಿಯ ತೋಡ ಕಾಂಗ್ರೆಸ್ ಬದ್ಧತೆ ಈ ಘೋಷ ವಾಕ್ಯದೊಂದಿಗೆ ಪ್ರಣಾಳಿಕೆ ತಯಾರು ಮಾಡಿದ್ದೇವೆ ಎಂದರು.

ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನ ಪ್ರಣಾಳಿಕೆ ಜನರಿಗೆ ಸಾಕಷ್ಟು ರಿಲೀಫ್ ಕೊಡಲಿದೆ. ನಾವು ಏನು ಹೇಳುತ್ತೇವೆ. ಅದನ್ನು ಮಾಡುತ್ತೇವೆ. ನಾವು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನಮ್ಮ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದ್ದಾರೆ.

ಬಿಎಪಿಲ್ ಕಟುಂಬಕ್ಕೆ ಪ್ರತಿ ತಿಂಗಳು 10 ಕೆಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ವಿದ್ಯುತ್ ನೀಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.ನೀಡಲಾಗುವುದು, ಯುವನಿಧಿ, ನಿರುದ್ಯೋಗ ಭತ್ಯೆ, ಪದವೀಧರರಿಗೆ 3,000 ರೂ. ಡಿಪ್ಲೋಮಾ ಪಡೆದವರಿಗೆ 1,500 ರೂ. ನೀಡುವುದಾಗಿ ಎಂದು ಹೇಳಿದ್ದಾರೆ.