Friday, 12th April 2024

ಕರೋನಾ ಕರ್ಫ್ಯೂ’ಗೆ ಕರಾವಳಿ ಭಾಗದಲ್ಲಿ ವ್ಯಾಪಕ ವಿರೋಧ

ಬೆಂಗಳೂರು: ಕರೋನಾ ಕಟ್ಟಿ ಹಾಕಲು ರಾಜ್ಯದ 8 ಜಿಲ್ಲೆಗಳಲ್ಲಿ ಕರೋನಾ ಕರ್ಫ್ಯೂ ಜಾರಿ ಮಾಡಲು ಮುಂದಾಗಿರುವ ರಾಜ್ಯದ ಸರ್ಕಾರದ ತೀರ್ಮಾನಕ್ಕೆ ಆಡಳಿತಾರೂಢ ಬಿಜೆಪಿ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ.

ಕರಾವಳಿ ಭಾಗದ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ರಘುಪತಿ ಭಟ್‍ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಸರ್ಕಾರ ಕೊರೊನಾ ಕರ್ಫ್ಯೂ ಹಿಂಪಡೆಯಬೇಕೆಂದು ಮನವಿ ಮಾಡಿದ್ದಾರೆ.

ಶಾಸಕ ವೇದವ್ಯಾಸ ಕಾಮತ್, ಮಂಗಳೂರಿನಲ್ಲಿ ರಾತ್ರಿ ವೇಳೆ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕೋವಿಡ್ ನಿಯಮ ಗಳನ್ನು ಪಾಲಿಸಿಕೊಂಡು ನಡೆಸಲು ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಕಳೆದ ವರ್ಷವೂ ಲಾಕ್‍ಡೌನ್ ಕಾರಣದಿಂದ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗಲಿಲ್ಲ. ಈ ವರ್ಷವೂ ಅದೇ ಕಾರಣಕ್ಕೆ ನಿಂತು ಹೋದರೆ ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಕರಾವಳಿಯಲ್ಲಿ ಈಗಾಗಲೇ ನಿಗದಿಯಾಗಿರುವ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರ ಅವಕಾಶ ಕಲ್ಪಿಸಬೇಕಾಗಿ ವಿನಂತಿ ಮಾಡಿ ದ್ದೇನೆ ಎಂದು ಹೇಳಿದ್ದಾರೆ. ಉಡುಪಿ, ಮಣಿಪಾಲ ನಗರದಲ್ಲಿ ನೈಟ್ ಕರ್ಫ್ಯೂ ಬೇಡ ಎಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ.

ಏಪ್ರಿಲ್-ಮೇ ತಿಂಗಳಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ದೈವದ ಕೋಲ, ನಾಗಾರಾಧನೆ, ಯಕ್ಷಗಾನ ನಡೆಯ ಲಿದೆ. ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಕರ್ಫ್ಯೂ ಜಾರಿಯಾದರೆ ರಾತ್ರಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ತೊಂದರೆ ಆಗುತ್ತದೆ ಎಂದಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!