ಮಾನನಷ್ಟ ಮೊಕದ್ದಮೆ ಸಂಬಂಧ ತಮ್ಮ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಿ.ರೂಪಾ ಸಲ್ಲಿಸಿದ್ದ ಕ್ರಿಮಿನಲ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ರೂಪಾ ಅವರನ್ನು ಪ್ರಾಸಿಕ್ಯೂಷನ್‌ಗೆ ಒಳಪಡಿಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾ ನುಮತಿ ಪಡೆದಿಲ್ಲ. ಜತೆಗೆ, ಸರ್ಕಾರಿ ಅಧಿಕಾರಿಯೊಬ್ಬರು ಮತ್ತೋರ್ವ ಅಧಿಕಾರಿಯ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸುವುದು ಮಾನನಷ್ಟ ಪ್ರಕರಣದ ವ್ಯಾಪ್ತಿಗೆ ಬರುವು ದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಇದರಿಂದಾಗಿ ಕಾನೂನು ಹೋರಾಟದಲ್ಲಿ ಡಿ.ರೂಪಾಗೆ ಗೆಲುವಾಗಿದ್ದು, ದೂರುದಾರ ಎಚ್. ಎನ್. ಸತ್ಯನಾರಾಯಣ ರಾವ್‌ಗೆ ತೀವ್ರ ಹಿನ್ನಡೆಯಾಗಿದೆ.